ADVERTISEMENT

ನಿಗದಿಯಂತೆ ಸಿಬಿಎಸ್‌ಇ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 25 ಮೇ 2017, 19:30 IST
Last Updated 25 ಮೇ 2017, 19:30 IST

ನವದೆಹಲಿ: 10 ಹಾಗೂ 12ನೇ ತರಗತಿಯ ಸಿಬಿಎಸ್‌ಇ ಫಲಿತಾಂಶಗಳು ನಿಗದಿಯಂತೆ ಪ್ರಕಟವಾಗಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಗುರುವಾರ ಹೇಳಿದ್ದಾರೆ.

ಪರೀಕ್ಷಾ ಫಲಿತಾಂಶ ಪ್ರಕಟ ಸಂಬಂಧ ಇತ್ತೀಚೆಗೆ ದೆಹಲಿ ಹೈಕೋರ್ಟ್ ನೀಡಿರುವ ಆದೇಶದ ಪರಿಣಾಮದ ಬಗ್ಗೆ ಚಿಂತೆ ಬೇಡ ಎಂದು ಅವರು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.

ಆದರೆ ಫಲಿತಾಂಶ ಪ್ರಕಟಣೆ ದಿನಾಂಕವನ್ನು ಸಚಿವಾಲಯ ಖಚಿತವಾಗಿ ಹೇಳಿಲ್ಲ. ಕಳೆದ ವರ್ಷ ಮೇ 21ರಂದು ಫಲತಾಂಶ ಪ್ರಕಟವಾಗಿತ್ತು. ಈ ಬಾರಿ ಒಂದು ವಾರ ತಡವಾಗಿ ಪರೀಕ್ಷೆಗಳು ಆರಂಭವಾಗಿದ್ದವು. ಇದೇ ಮೇ ಅಂತ್ಯದಲ್ಲಿ ಫಲಿತಾಂಶ ಪ್ರಕಟವಾಗುವ ವಿಶ್ವಾಸವನ್ನು ಮಂಡಳಿ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.