ADVERTISEMENT

ನಿವೃತ್ತಿ ನಂತರವೂ ಇಲಾಖಾ ವಿಚಾರಣೆ: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2014, 19:30 IST
Last Updated 20 ಅಕ್ಟೋಬರ್ 2014, 19:30 IST

ನವದೆಹಲಿ (ಪಿಟಿಐ): ಬೊಕ್ಕಸಕ್ಕೆ ಹಾನಿ, ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರುವ ಸರ್ಕಾರಿ ನೌಕರರ ವಿರುದ್ಧದ ಇಲಾಖೆ ವಿಚಾರಣಾ ಪ್ರಕ್ರಿಯೆಯನ್ನು ಅವರ ನಿವೃತ್ತಿ ನಂತರವೂ ಮುಂದುವರೆಸಬಹುದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಎಸ್‌. ಖೆಹರ್ ನೇತೃತ್ವದ ಪೀಠ, ‘ನಿವೃತ್ತಿ ನಂತರವೂ ನೌಕರರ ವಿರುದ್ಧದ ಇಲಾಖಾ ವಿಚಾರಣಾ ಪ್ರಕ್ರಿಯೆ ಮುಂದುವರೆಸಬಹದು. ಜತೆಗೆ, ಅಂತಹ ನೌಕರರಿಂದ ಆಗಿರುವ ನಷ್ಟವನ್ನು ಭರಿಸುವಂತೆ ಆದೇಶಿಸಬಹುದಾಗಿದೆ’ ಎಂದು ಸ್ಪಷ್ಟಪಡಿಸಿತು.

ಬೊಕ್ಕಸಕ್ಕೆ ನಷ್ಟ ಉಂಟುಮಾಡುವ ಗಂಭೀರ ಆರೋಪಗಳಿದ್ದಾಗ ಮಾತ್ರ, ಸರ್ಕಾರಿ ನೌಕರರನ್ನು ನಿವೃತ್ತಿ ನಂತರವೂ ಇಲಾಖೆ ವಿಚಾರಣೆಗೆ ಒಳಪಡಿಸಬಹುದು ಎಂದು ಕಲ್ಕತ್ತಾ ಹೈಕೋರ್ಟ್ ಈ ಮೊದಲು ನೀಡಿದ್ದ ಆದೇಶವನ್ನು ಇದೇ ವೇಳೆ ತಳ್ಳಿಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.