ADVERTISEMENT

ನೀಟ್‌ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ

​ಪ್ರಜಾವಾಣಿ ವಾರ್ತೆ
Published 24 ಮೇ 2016, 6:42 IST
Last Updated 24 ಮೇ 2016, 6:42 IST
ನೀಟ್‌ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ
ನೀಟ್‌ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ   

ನವದೆಹಲಿ: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ ಪ್ರವೇಶದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿರಿಸುವ ಉದ್ದೇಶದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅಂಕಿತ ಹಾಕಿದ್ದಾರೆ.

ಸುಗ್ರೀವಾಜ್ಞೆ ಹೊರಡಿಸುವ ಅಗತ್ಯದ ಬಗ್ಗೆ ವಿವರಣೆ ನೀಡಲು ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಸೋಮವಾರ ರಾಷ್ಟ್ರಪತಿಯನ್ನು ಭೇಟಿಯಾಗಿ ಇನ್ನಷ್ಟು ಮಾಹಿತಿಯನ್ನು ನೀಡಿದ್ದರು.

ಸುಗ್ರೀವಾಜ್ಞೆ ಹೊರಡಿಸಿದರೆ ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ಸಂಕಲ್ಪ ಚಾರಿಟಬಲ್‌ ಟ್ರಸ್ಟ್‌ ಎಂಬ ಸಂಸ್ಥೆ ಈಗಾಗಲೇ ಘೋಷಿಸಿದೆ.

ಇಂದು ರಾಷ್ಟ್ರಪತಿ ಅವರು ಸುಗ್ರೀವಾಜ್ಞೆಗೆ ಅಂಕಿತ ಹಾಕುವ ಮೂಲಕ ಹಲವು ವಿವಾದಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.