ADVERTISEMENT

ನೌಕಾಪಡೆ ಬಲವರ್ಧನೆಗೆ ಕ್ರಮ: ಜೇಟ್ಲಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2014, 9:32 IST
Last Updated 24 ಜೂನ್ 2014, 9:32 IST

ನವದೆಹಲಿ (ಪಿಟಿಐ): ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ನೌಕಾಪಡೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲಾಗುವುದು ಎಂದು ರಕ್ಷಣಾ ಸಚಿವ ಅರುಣ್‌ ಜೇಟ್ಲಿ  ಮಂಗಳವಾರ ತಿಳಿಸಿದ್ದಾರೆ.

ನೌಕಾಪಡೆ ಕಮಾಂಡರ್‌ಗಳ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರರೊಂದಿಗೆ ಮಾತನಾಡುತ್ತ ನೌಕಾ ಪಡೆಗೆ ಹಿಂದಿನ ಸರ್ಕಾರ ನೀಡಿರುವ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.

ನೆನೆಗುದಿಗೆ ಬಿದ್ದಿರುವ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಸಿಬ್ಬಂದಿಗಳ ನೇಮಕಾತಿ, ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಖರೀದಿ ಮಾಡಲಾಗುವುದು ಎಂದರು.

6000 ಕೋಟಿ ರೂಪಾಯಿ ವೆಚ್ಚದ  16 ಬಹುಉಪಯೋಗಿ ಹೆಲಿಕಾಫ್ಟರ್‌ಗಳ ಖರೀದಿ ಮತ್ತು 7 ಜಲಾಂತರ್ಗಾಮಿ ನೌಕೆಗಳನ್ನು ಖರೀದಿಗೆ ಮರು ಚಾಲನೆ ನೀಡಲಾಗುವುದು ಎಂದು ಜೇಟ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT