ADVERTISEMENT

ನ್ಯಾಯಮೂರ್ತಿಗಳ ವೇತನ ಹೆಚ್ಚಳ

ಅಧಿವೇಶನದಲ್ಲಿ ಮಸೂದೆ ಮಂಡನೆ

ಪಿಟಿಐ
Published 22 ನವೆಂಬರ್ 2017, 19:30 IST
Last Updated 22 ನವೆಂಬರ್ 2017, 19:30 IST
ನ್ಯಾಯಮೂರ್ತಿಗಳ ವೇತನ ಹೆಚ್ಚಳ
ನ್ಯಾಯಮೂರ್ತಿಗಳ ವೇತನ ಹೆಚ್ಚಳ   

ನವದೆಹಲಿ: ಸುಪ್ರೀಂಕೋರ್ಟ್‌ ಹಾಗೂ 24 ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ವೇತನ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ವೇತನ ಹೆಚ್ಚಿಸುವ ಸಂಬಂಧ ಎರಡು ಮಸೂದೆಗಳನ್ನು ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ.

ವೇತನ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಹೆಚ್ಚಳವು 2016ರ ಜನವರಿ1ರಿಂದ ಅನ್ವಯವಾಗಲಿದೆ. ಈ ಹೊಸ ಪ್ರಸ್ತಾವನೆಯಿಂದ 2,500 ನಿವೃತ್ತ ನ್ಯಾಯಮೂರ್ತಿಗಳಿಗೂ ಅನುಕೂಲವಾಗಲಿದೆ.

ADVERTISEMENT

ನ್ಯಾಯಮೂರ್ತಿಗಳ ವೇತನ ಹೆಚ್ಚಿಸುವಂತೆ ಸುಪ್ರೀಂಕೋರ್ಟ್‌ನ ಹಿಂದಿನ ಮುಖ್ಯ ನ್ಯಾಯಮೂರ್ತಿ ಟಿ.ಎಸ್‌. ಠಾಕೂರ್‌ ಅವರು 2016ರಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ವೇತನ ಮತ್ತು ಭತ್ಯೆಯಲ್ಲಿ ವಿವಿಧ ರೀತಿಯ ಕಡಿತಗಳನ್ನು ಮಾಡಿದ ಬಳಿಕ ಪ್ರಸ್ತುತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗೆ ₹1.5 ಲಕ್ಷ  ದೊರೆಯುತ್ತಿದೆ. ಮುಖ್ಯ ನ್ಯಾಯಮೂರ್ತಿಗೆ ಇದಕ್ಕಿಂತಲೂ ಹೆಚ್ಚಿನ ವೇತನ ದೊರೆಯುತ್ತದೆ. ಬಾಡಿಗೆ ರಹಿತ ವಸತಿ ಸೌಲಭ್ಯವನ್ನು ನ್ಯಾಯಮೂರ್ತಿಗಳಿಗೆ ಕಲ್ಪಿಸಲಾಗುತ್ತದೆ.

ಪ್ರಸ್ತಾವನೆಯಲ್ಲಿರುವ ವೇತನ (ಪ್ರತಿ ತಿಂಗಳಿಗೆ)

* ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ  ₹2.80 ಲಕ್ಷ

*ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಿಗೆ ಮತ್ತು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ₹2.50 ಲಕ್ಷ

* ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ₹2.25 ಲಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.