ADVERTISEMENT

ನ.9ಕ್ಕೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ

ಏಜೆನ್ಸೀಸ್
Published 12 ಅಕ್ಟೋಬರ್ 2017, 11:33 IST
Last Updated 12 ಅಕ್ಟೋಬರ್ 2017, 11:33 IST
ನ.9ಕ್ಕೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ
ನ.9ಕ್ಕೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ   

ನವದೆಹಲಿ: ಹಿಮಾಚಲ ಪ್ರದೇಶ ರಾಜ್ಯದ ವಿಧಾನಸಭಾ ಸ್ಥಾನಗಳಿಗೆ ನವೆಂಬರ್‌ನಲ್ಲಿ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಿಗೆ ನವೆಂಬರ್‌ 9ರಂದು ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಅಚಲ್‌ ಕುಮಾರ್‌ ಜ್ಯೋತಿ ಪತ್ರಿಕಾಗೋಷ್ಠಿಯಲ್ಲಿ ಪ‍್ರಕಟಿಸಿದರು.

‌ನವೆಂಬರ್‌ 9ರಂದು ಮತದಾನ ನಡೆಯಲಿದ್ದು, ಡಿ.18ರಂದು ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಹಿಮಾಚಲ ಪ್ರದೇಶದ ಮತ ಎಣಿಕೆಗೂ ಮುನ್ನವೇ ಗುಜರಾತ್‌ನಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದರು.

ADVERTISEMENT

ಹಿಮಾಚಲದಲ್ಲಿ 49.5 ಲಕ್ಷ ಮತದಾರರಿದ್ದು, 7521 ಮತಗಟ್ಟೆ ಕೇಂದ್ರಗಳಲ್ಲಿ ಮತದಾನಕ್ಕೆ ಅವಕಾಶವಿರುತ್ತದೆ. ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿಯೂ ವಿಡಿಯೊ ರೆಕಾರ್ಡಿಂಗ್‌ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

ವಿವಿಪ್ಯಾಟ್‌ ಒಳಗೊಂಡ ಎಲೆಕ್ಟ್ರಾನಿಕ್‌ ಮತಯಂತ್ರಗಳನ್ನು ಮತದಾನ ಪ್ರಕ್ರಿಯೆಯಲ್ಲಿ ಬಳಸಲಾಗುತ್ತಿದ್ದು, ವಿವಿಪ್ಯಾಟ್‌ ಸ್ಕ್ರೀನ್‌ 10 ಸೆಂ.ಮೀ. ಎತ್ತರ ಹಾಗೂ 5.6 ಸೆಂ.ಮೀ. ಅಗಲ ಹೊಂದಿರಲಿದೆ ಎಂದರು.

ಪೂರ್ಣ ಮಹಿಳಾ ಸಿಬ್ಬಂದಿಗಳೇ ನಿರ್ವಹಿಸುವ 136 ಮತಗಟ್ಟೆಗಳು ಹಿಮಾಚಲ ಪ್ರದೇಶ ಚುನಾವಣೆಯಲ್ಲಿನ ವಿಶೇಷಗಳಲ್ಲೊಂದು. ನಾಮಪತ್ರ ಸಲ್ಲಿಕೆಗೆ ಅ.27 ಕೊನೇದಿನವಾಗಿದೆ.

ಚುನಾವಣೆಗಾಗಿ ಅಭ್ಯರ್ಥಿ ಗರಿಷ್ಠ ₹28 ಲಕ್ಷ ಖರ್ಚು ಮಾಡಬಹುದು ಎಂದು ಮಾಹಿತಿ ನೀಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.