ADVERTISEMENT

ಪಂಚಾಯತ್‌ ಚುನಾವಣೆಗೆ ಕನಿಷ್ಠ ವಿದ್ಯಾರ್ಹತೆ ಬೇಕು: ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2015, 11:48 IST
Last Updated 10 ಡಿಸೆಂಬರ್ 2015, 11:48 IST

ನವದೆಹಲಿ (ಪಿಟಿಐ): ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ಮತ್ತು ಕೆಲವು ಮಾನದಂಡಗಳನ್ನು ಹೊಂದಿರಬೇಕು ಎಂದು ಹರಿಯಾಣ ಸರ್ಕಾರ ಜಾರಿ ಮಾಡಲು ಉದ್ದೇಶಿಸಿದ್ದ ನೂತನ ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ.

ಹರಿಯಾಣ ಸರ್ಕಾರ ಪಂಚಾಯತ್‌ ರಾಜ್‌ ಕಾಯ್ದೆಗೆ ತಿದ್ದುಪಡಿ ತಂದು ಕನಿಷ್ಠ ವಿದ್ಯಾರ್ಹತೆ ಮತ್ತು ಕೆಲವು ಮಾನದಂಡಗಳನ್ನು  ನಿಗದಿಪಡಿಸಿತ್ತು.

ಚುನಾವಣೆಗೆ ಸ್ಪರ್ಧಿಸುವವರು ಹತ್ತನೇ ತರಗತಿಯಲ್ಲಿ  ಉತ್ತೀರ್ಣರಾಗಿರಬೇಕು, ಅವರು ವಿದ್ಯುತ್‌ ಬಿಲ್‌, ಕಂದಾಯ ಬಿಲ್‌ಗಳನ್ನು ಪಾವತಿಸಿರಬೇಕು ಹಾಗೂ ಅಪರಾಧ ಹಿನ್ನೆಲೆಯನ್ನು ಹೊಂದಿರಬಾರದು ಎಂಬ ಹಲವು ಮಾನದಂಡಗಳನ್ನು ನಿಗದಿಪಡಿಸಲಾಗಿತ್ತು. ಇದನ್ನು  ಪ್ರಶ್ನಿಸಿ ಕೆಲವರು ಸುಪ್ರಿಂ ಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ರಿಟ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸುವ ಮೂಲಕ ಹರಿಯಾಣ ಸರಕಾರದ ಕ್ರಮವನ್ನು ಎತ್ತಿ ಹಿಡಿಯಿತು. ಇನ್ನು ಮುಂದೆ ದೇಶದ ಎಲ್ಲ ಪಂಚಾಯತ್‌ ಚುನಾವಣೆಗಳಿಗೂ ವಿದ್ಯಾರ್ಹತೆ ಮತ್ತು ಮಾನದಂಡಗಳು ಅನ್ವಯವಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.