ADVERTISEMENT

ಪಶ್ಚಿಮ ಘಟ್ಟ: ನಿರ್ಧಾರಕ್ಕೂ ಮುನ್ನ ಸಿ.ಎಂ.ಗಳ ಸಭೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2014, 19:30 IST
Last Updated 17 ಜೂನ್ 2014, 19:30 IST

ನವದೆಹಲಿ: ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ಡಾ. ಕಸ್ತೂರಿರಂಗನ್‌ ಸಮಿತಿ ನೀಡಿರುವ ವರದಿ ಬಗ್ಗೆ ಅಂತಿಮ ತೀರ್ಮಾನಕ್ಕೆ ಮೊದಲು ಸಂಬಂಧ­ಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚಿಸುವುದಾಗಿ ಅರಣ್ಯ ಸಚಿವ ಪ್ರಕಾಶ್‌ ಜಾವಡೇಕರ್‌ ಮಂಗಳವಾರ ಪುನರುಚ್ಚರಿಸಿದರು.

ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಏಳು ರಾಜ್ಯಗಳು ಬರಲಿದ್ದು, ಕಸ್ತೂರಿ­ರಂಗನ್‌ ಸಮಿತಿ ಮೇಲೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲರ ಅಭಿಪ್ರಾಯ ಪಡೆಯುವುದಾಗಿ ಸಚಿವರು ವಿವರಿಸಿದರು.

ಸದ್ಯದಲ್ಲೇ ಮುಖ್ಯಮಂತ್ರಿಗಳ ಸಭೆ ಕರೆಯಲಾಗುವುದು. ಸಭೆಯ ದಿನಾಂಕ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದರು. ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತಂತೆ ಮಾಧವ ಗಾಡ್ಗೀಳ್‌ ಸಮಿತಿ ಕೂಡಾ ವರದಿ ಸಲ್ಲಿಸಿದ್ದು, ಕೇರಳ ಸೇರಿದಂತೆ ಅನೇಕ ರಾಜ್ಯಗಳು ಈ ವರದಿಯನ್ನು ಬಲವಾಗಿ ವಿರೋಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.