ADVERTISEMENT

ಪಾಕಿಸ್ತಾನ‌ ಆಕ್ರಮಿತ ಕಾಶ್ಮೀರದಲ್ಲಿ ನೆಲೆಯೂರಲು ಐ.ಎಸ್‌ ಉಗ್ರರ ಯತ್ನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2015, 19:27 IST
Last Updated 3 ಜುಲೈ 2015, 19:27 IST

ಜಾಂಗರ್‌ (ಜಮ್ಮು ಮತ್ತು ಕಾಶ್ಮೀರ ) (ಪಿಟಿಐ): ಜಾಗತಿಕ ಮಟ್ಟದಲ್ಲಿ ಭಾರಿ ತಲ್ಲಣಕ್ಕೆ ಕಾರಣವಾಗಿರುವ ಭಯೋತ್ಪಾದನಾ ಸಂಘಟನೆ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನೆಲೆಯೂರಲು ಯತ್ನಿಸುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಸ್ವತಃ ಭಾರತೀಯ ಸೇನೆಯ ಹಿರಿಯ ಅಧಿಕಾರಿ ಶುಕ್ರವಾರ ಬಹಿರಂಗಪಡಿಸಿದ್ದಾರೆ.

‘ನಮಗೆ ದೊರೆತಿರುವ ಗುಪ್ತಚರ ಮಾಹಿತಿ ಪ್ರಕಾರ ಐಎಸ್‌ ಉಗ್ರರು ದೊಡ್ಡ ಮಟ್ಟದಲ್ಲಿ ಅಲ್ಲದಿದ್ದರೂ ನಿಧಾನವಾಗಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆ ಕಂಡುಕೊಳ್ಳಲು ಹವಣಿಸುತ್ತಿದ್ದಾರೆ’ ಎಂದು 16 ಕಾರ್ಪ್ಸ್‌ನ ಜನರಲ್‌ ಆಫಿಸರ್‌ ಕಮಾಂಡಿಂಗ್‌ ಲೆಫ್ಟಿನೆಂಟ್‌ ಜನರಲ್‌ ಕೆ.ಎಚ್‌. ಸಿಂಗ್‌ ತಿಳಿಸಿದರು.

ಸೇನಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಭಾರತದೊಳಗೆ ನುಸಳಲು  200–225 ಉಗ್ರರು ಪಿರ್‌ ಪಂಚಾಲ್‌ ವಲಯದ ಗಡಿಯಲ್ಲಿ ಹೊಂಚು ಹಾಕಿ ಕುಳಿತಿದ್ದಾರೆ ಎಂದರು.

ಭಾರತ–ಪಾಕ್ ಗಡಿಯಲ್ಲಿ ಸಾಕಷ್ಟು ಉಗ್ರರ ತರಬೇತಿ ಶಿಬಿರಗಳು ಇನ್ನೂ ಕ್ರಿಯಾಶೀಲವಾಗಿದ್ದು, ಅವರಿಗೆ ಅನುಕೂಲವಾಗುವ ವ್ಯವಸ್ಥೆ ಬಲವಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.