ADVERTISEMENT

ಪಿಎಂಇಟಿ ಫಲಿತಾಂಶಕ್ಕೆ ಸುಪ್ರೀಂ ತಡೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2015, 11:18 IST
Last Updated 3 ಜೂನ್ 2015, 11:18 IST

ನವದೆಹಲಿ (ಐಎಎನ್‌ಎಸ್‌): ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿ ಪರೀಕ್ಷೆಯ (ಪಿಎಂಇಟಿ) ಫಲಿತಾಂಶವನ್ನು ಜೂನ್‌ 9ರವರೆಗೆ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಬುಧವಾರ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಗೆ (ಸಿಬಿಎಸ್‌ಇ) ನಿರ್ದೇಶನ ನೀಡಿದೆ.

ಮೇ ನಾಲ್ಕರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಹರಿಯಾಣ ಪೊಲೀಸರು ತನಿಖೆ ನಡೆಸುತ್ತಿರುವುದರಿಂದ ಫಲಿತಾಂಶ ತಡೆಹಿಡಿಯುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಮರು ಪರೀಕ್ಷೆ ನಡೆಸಬೇಕೆ ಬೇಡವೇ ಎಂಬ ಬಗ್ಗೆ ತನಿಖಾ ವರದಿ ಬಂದ ಬಳಿಕ ತೀರ್ಮಾನಿಸಲಾಗುವುದು ಎಂದು ನ್ಯಾಯಮೂರ್ತಿ ಪ್ರಫುಲ್ಲ ಸಿ. ಪಂತ್‌ ಮತ್ತು ನ್ಯಾಯಮೂರ್ತಿ ಅಮಿತಾವ ರಾಯ್‌ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ADVERTISEMENT

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿ ಪರೀಕ್ಷೆಯ ಫಲಿತಾಂಶವನ್ನು ಜೂನ್‌ 5ರಂದು ಪ್ರಕಟಿಸುವುದಾಗಿ ಸಿಬಿಎಸ್‌ಇ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.