ನವದೆಹಲಿ (ಐಎಎನ್ಎಸ್): ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ಪ್ರವೇಶ ಪರೀಕ್ಷೆಯ (ಪಿಎಂಇಟಿ) ಫಲಿತಾಂಶವನ್ನು ಜೂನ್ 9ರವರೆಗೂ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಸಿಬಿಎಸ್ಇಗೆ ಸೂಚಿಸಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಫುಲ್ಲ ಸಿ.ಪಂತ್ ಮತ್ತು ಅಮಿತಾವ್ ರಾಯ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಬುಧವಾರ ಈ ಆದೇಶ ನೀಡಿದೆ.
ಪ್ರಶ್ನೆಪತ್ರಿಕೆ ಬಹಿರಂಗವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮರು ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ವರದಿ ಬಂದ ನಂತರ ನಿರ್ಧರಿಸುವುದಾಗಿ ಪೀಠವು ತಿಳಿಸಿದೆ.
ಮೇ 4 ರಂದು ಪರೀಕ್ಷೆ ನಡೆಯುವ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪೂರ್ವನಿಗದಿಯಂತೆ ಸಿಬಿಎಸ್ಇ ಇದೇ 5ರಂದು ಫಲಿತಾಂಶ ಪ್ರಕಟಿಸಬೇಕಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.