ADVERTISEMENT

ಪುಣೆ ಎಫ್‌ಟಿಐಐ ಅಧ್ಯಕ್ಷರಾಗಿ ಅನುಪಮ್‌ ಖೇರ್‌ ನೇಮಕ

500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಟ

ಏಜೆನ್ಸೀಸ್
Published 11 ಅಕ್ಟೋಬರ್ 2017, 9:43 IST
Last Updated 11 ಅಕ್ಟೋಬರ್ 2017, 9:43 IST
ಪುಣೆ ಎಫ್‌ಟಿಐಐ ಅಧ್ಯಕ್ಷರಾಗಿ ಅನುಪಮ್‌ ಖೇರ್‌ ನೇಮಕ
ಪುಣೆ ಎಫ್‌ಟಿಐಐ ಅಧ್ಯಕ್ಷರಾಗಿ ಅನುಪಮ್‌ ಖೇರ್‌ ನೇಮಕ   

ನವದೆಹಲಿ: ಪುಣೆಯ ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಸಂಸ್ಥೆ (ಎಫ್‌ಟಿಐಐ)ಯ ಅಧ್ಯಕ್ಷರಾಗಿ ನಟ ಅನುಪಮ್ ಖೇರ್‌ ನೇಮಕಗೊಂಡಿದ್ದಾರೆ.

ಬಿಜೆಪಿ ಸದಸ್ಯ ಹಾಗೂ ಕಿರುತೆರೆ ಕಲಾವಿದ ಗಜೇಂದ್ರ ಚೌಹಾಣ್‌ 2015ರಿಂದ ಎಫ್‌ಟಿಐಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೇ ಮಾರ್ಚ್‌ನಲ್ಲಿ ಅವರ ಅಧಿಕಾರ ಅವಧಿ ಪೂರ್ಣಗೊಂಡಿತ್ತು. ಎರಡು ವರ್ಷಗಳ ಹಿಂದೆ ಅವರ ನೇಮಕವನ್ನು 139 ದಿನಗಳ ಪ್ರತಿಭಟನೆ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಅಧ್ಯಕ್ಷ ಸ್ಥಾನಕ್ಕೆ ಅನುಪಮ್‌ ಖೇರ್‌ ನೇಮಕವಾಗಿದ್ದಾರೆ.

ಹಾಲಿವುಡ್, ಬಾಲಿವುಡ್‌ ಸೇರಿ ಹಲವು ಚಿತ್ರರಂಗಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅನುಪಮ್‌ ಖೇರ್‌, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅನೇಕ ಚಿತ್ರಗಳಲ್ಲಿ ಭಾಗಿಯಾಗಿದ್ದಾರೆ. ರಂಗಭೂಮಿ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ಅವರು ಈ ಹಿಂದೆ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷರೂ ಆಗಿದ್ದರು.

ADVERTISEMENT

ಸಿನಿಮಾ ಮತ್ತು ಕಲೆಗೆ ನೀಡಿರುವ ಕೊಡುಗೆಯನ್ನು ಗಮನಿಸಿ ಭಾರತ ಸರ್ಕಾರ ಪದ್ಮಶ್ರೀ(2004) ಹಾಗೂ ಪದ್ಮಭೂಷಣ(2016) ನೀಡಿ ಗೌರವಿಸಿದೆ. ಅವರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ)ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.