ನವದೆಹಲಿ (ಪಿಟಿಐ): ಪೆಟ್ರೋಲ್ ದರವನ್ನು ಮಂಗಳವಾರ ಮಧ್ಯರಾತ್ರಿಯಿಂದ ಲೀಟರ್ಗೆ ₨1 ಕಡಿತ ಮಾಡಲಾಗಿದ್ದು, ಡೀಸೆಲ್ ದರ ಮುಂದಿನ ವಾರ ಕಡಿತವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಕಳೆದ ಐದು ವರ್ಷಗಳಲ್ಲಿ ಇದೇ ಮೊದಲ ಸಲ ಡೀಸೆಲ್ ದರವನ್ನು ಲೀಟರ್ಗೆ ₨2.50ರಷ್ಟು ಕಡಿತ ಮಾಡುವ ಸಾಧ್ಯತೆಗಳಿವೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿದ ಕಾರಣ ದೇಶೀಯ ತೈಲೋದ್ಯಮ ಕಂಪೆನಿಗಳು ಲಾಭದಲ್ಲಿ ನಡೆಯುತ್ತಿವೆ. ಹೀಗಾಗಿ ಪೆಟ್ರೋಲ್, ಡೀಸೆಲ್ ದರ ಕಡಿತಕ್ಕೆ ಸರ್ಕಾರ ನಿರ್ಧರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.