ADVERTISEMENT

ಪ್ರತಿಕೂಲ ಹವಾಮಾನ ತಡವಾಗಿ ದೆಹಲಿ ತಲುಪಿದ ಮೋದಿ

​ಪ್ರಜಾವಾಣಿ ವಾರ್ತೆ
Published 29 ಮೇ 2016, 20:07 IST
Last Updated 29 ಮೇ 2016, 20:07 IST

ನವದೆಹಲಿ (ಪಿಟಿಐ): ಪ್ರಧಾನಿ  ನರೇಂದ್ರ ಮೋದಿ ಅವರು ಸಂಚರಿಸು ತ್ತಿದ್ದ ವಿಮಾನವು  ಭಾರಿ ಬಿರುಗಾಳಿ, ಮಳೆಯಿಂದಾಗಿ ಭಾನುವಾರ ರಾತ್ರಿ ತಡವಾಗಿ ದೆಹಲಿ ತಲುಪಿತು.

ಮೋದಿ ಅವರು ಕರ್ನಾಟದ ದಾವಣಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಬಳಿಕ ದೆಹಲಿಗೆ ವಾಪಸಾದರು. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ದೆಹಲಿಯಲ್ಲಿ ವಿಮಾನ ಇಳಿಯಲು ಸಾಧ್ಯವಾಗಲಿಲ್ಲ.

ಹೀಗಾಗಿ ಮಾರ್ಗ ಬದಲಿಸಿ ವಿಮಾನ ಜೈಪುರದತ್ತ ಹೊರಟಿತು. ರಾತ್ರಿ 9.15ಕ್ಕೆ  ಜೈಪುರದಲ್ಲಿ ವಿಮಾನ ಇಳಿಯಿತು. ಬಿರುಗಾಳಿ ನಿಂತ ಬಳಿಕ ಮಧ್ಯರಾತ್ರಿ ವೇಳೆಗೆ ಪ್ರಧಾನಿ ಮೋದಿ ಅವರು ದೆಹಲಿ ತಲುಪಿದರು ಎಂದು ಮೂಲಗಳು ತಿಳಿಸಿವೆ.

ಹವಾಮಾನ ವೈಪರೀತ್ಯದಿಂದಾಗಿ ಮೋದಿ ಪ್ರಯಾಣಿಸುತ್ತಿದ್ದ ವಿಮಾನ ಸೇರಿದಂತೆ ಒಟ್ಟು 27 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ಹೀಗಾಗಿ ಪ್ರಯಾಣಿಕರು ನಿಗದಿತ ಸಮಯಕ್ಕೆ ಹೊರಡಲು ಸಾಧ್ಯವಾಗಲಿಲ್ಲ. 92 ಕಿ. ಮೀಟರ್‌ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದರಿಂದ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.