ನವದೆಹಲಿ: ಪ್ರಸ್ತುತ ಲೋಕಸಭಾ ಅಧಿವೇಶನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ‘ಸಾರ್ಕ್’ ಕೂಟದ ಸದಸ್ಯ ರಾಷ್ಟ್ರವಾದ ಭೂತಾನ್ಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.
ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ವಿದೇಶ ಪ್ರವಾಸ ಇದಾಗಲಿದೆ. ಪ್ರವಾಸ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇದುವರೆಗೂ ಅಧಿಕೃತ ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ ಅವರು ಭೂತಾನ್ಗೆ ಭೇಟಿ ನೀಡುವುದು ಬಹುತೇಕ ಖಚಿತ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.