ADVERTISEMENT

ಪ್ರಮಾಣ ವಚನ; ಸೋನಿಯಾ, ರಾಹುಲ್ ಭಾಗಿ

​ಪ್ರಜಾವಾಣಿ ವಾರ್ತೆ
Published 24 ಮೇ 2014, 11:37 IST
Last Updated 24 ಮೇ 2014, 11:37 IST

ನವದೆಹಲಿ(ಪಿಟಿಐ): ರಾಷ್ಟ್ರದ ನೂತನ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೇ 26ರಂದು ಅಧಿಕಾರ ಸ್ವೀಕರಿಸಲಿರುವ ಸಮಾರಂಭಕ್ಕೆ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದಾರೆ.

ಬಿಜೆಪಿಯ ಸಂಸದೀಯ ಮಂಡಳಿ ಹಾಗೂ ಮುಖಂಡರು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಮೋದಿ ಅವರನ್ನು ಆಯ್ಕೆ ಮಾಡಿದ 20 ಗಂಟೆಗಳ ನಂತರ ಕಾಂಗ್ರೆಸ್ ನ ಅಧ್ಯಕ್ಷೆ ಸೋನಿಯಾ ಅವರು ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.