ಚೆನ್ನೈ (ಪಿಟಿಐ): ಚೆನ್ನೈ ಮೆಟ್ರೋ ರೈಲಿನಲ್ಲಿ ಡಿಎಂಕೆ ಪಕ್ಷದ ಮುಖಂಡ ಎಂ.ಕೆ.ಸ್ಟಾಲಿನ್ ಪ್ರಯಾಣಿಕರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ.
ಸ್ಟಾಲಿನ್ ಮೆಟ್ರೋ ರೈಲಿನಲ್ಲಿ ಬೆಂಬಲಿಗರ ಜೊತೆ ಪ್ರಯಾಣಿಸುವಾಗ ಈ ಘಟನೆ ನಡೆದಿದೆ. ಸ್ಟಾಲಿನ್ ಯುವಕರೊಬ್ಬರಿಗೆ ಕಪಾಳಕ್ಕೆ ಹೊಡೆಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸ್ಟಾಲಿನ್ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್ ನಾನು ಆ ಯುವಕನ ಕಪಾಳಕ್ಕೆ ಹೊಡೆದಿಲ್ಲ ಬದಲಿಗೆ ಅಲ್ಲಿ ಮಹಿಳೆಯರಿದ್ದಾರೆ ಮುಂದೆ ಸರಿಯುವಂತೆ ಕೈ ಸನ್ನೆ ಮಾಡಿದೆ ಎಂದು ತಿಳಿಸಿದ್ದಾರೆ.
ಈ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಖಂಡಿಸಿದ್ದಾರೆ.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.