ಮುಂಬೈ (ಪಿಟಿಐ): ಬಾಲಿವುಡ್ ನಟಿ ಪ್ರೀತಿ ಜಿಂಟಾ ಅವರು ತಮ್ಮ ಹಳೆಯ ಗೆಳೆಯ ನೆಸ್ ವಾಡಿಯಾ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ವಾಂಖೆಡೆ ಕ್ರೀಡಾಂಗಣದಲ್ಲಿ ಘಟನೆ ನಡೆದಾಗ ಪೆವಿಲಿಯನ್ನಲ್ಲಿ ಇದ್ದ ಪ್ರೇಕ್ಷಕರ ಪಟ್ಟಿ ನೀಡುವಂತೆ ಬಿಸಿಸಿಐಗೆ ಸೂಚಿಸಿದ್ದಾರೆ.
‘ಘಟನೆ ನಡೆದ ದಿನ ಇದ್ದ ವೀಕ್ಷಕರು ಹಾಗೂ ಭದ್ರತಾ ಸಿಬ್ಬಂದಿ ಹೆಸರು, ಆಸನಗಳ ವ್ಯವಸ್ಥೆ... ಇತ್ಯಾದಿ ವಿವರಗಳನ್ನು ನೀಡುವಂತೆ ಬಿಸಿಸಿಐಗೆ ಪತ್ರ ಬರೆದಿದ್ದೇವೆ. ಇವು ತನಿಖೆಗೆ ನೆರವಾಗಲಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.