ADVERTISEMENT

ಬಜೆಟ್‌ಗೆ ಆಕ್ಷೇಪ  23ರಂದು ವಿಚಾರಣೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 19:35 IST
Last Updated 20 ಜನವರಿ 2017, 19:35 IST

ನವದೆಹಲಿ :  ಐದು ರಾಜ್ಯಗಳ ಚುನಾವಣೆ ಘೋಷಣೆ ಆಗಿರುವುದರಿಂದ ಬಜೆಟ್ ಮಂಡನೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಈ ತಿಂಗಳ 23ರಂದು ನಡೆಸಲಿದೆ.


ಬಜೆಟ್ ಮಂಡನೆಯನ್ನು ಮುಂದೂಡಲು  ಕಾನೂನಲ್ಲಿ ಇರುವ ಅವಕಾಶಗಳು ಮತ್ತು ಇತರ ಪುರಾವೆಗಳನ್ನು ಸಲ್ಲಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ಎಂ. ಎಲ್. ಶರ್ಮಾ ಅವರಿಗೆ ಮುಖ್ಯ ನ್ಯಾಯಮೂರ್ತಿ ಜೆ. ಎಸ್. ಖೇಹರ್ ಮತ್ತು ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ ಅವರ ನ್ಯಾಯಪೀಠವು ತಿಳಿಸಿತ್ತು. ಅರ್ಜಿದಾರರು ಸಲ್ಲಿಸಿರುವ ಹೆಚ್ಚುವರಿ ಪ್ರಮಾಣ ಪತ್ರ ಮತ್ತು ಪುರಾವೆಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಲು ನ್ಯಾಯಪೀಠವು ಒಪ್ಪಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT