ADVERTISEMENT

ಬಹುಮಹಡಿ ಕಟ್ಟಡದಲ್ಲಿ ಬೆಂಕಿ: ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು

​ಪ್ರಜಾವಾಣಿ ವಾರ್ತೆ
Published 9 ಜೂನ್ 2014, 19:30 IST
Last Updated 9 ಜೂನ್ 2014, 19:30 IST

ಚಂಡೀಗಡ (ಪಿಟಿಐ): ಭಾನುವಾರ ರಾತ್ರಿ ಇಲ್ಲಿನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ಇಬ್ಬರು ಅಗ್ನಿಶಾಮಕ ಸಿಬ್ಬಂದಿಯ ಶವಗಳನ್ನು ಅವಶೇಷಗಳ ಅಡಿಯಿಂದ ತೆಗೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇಲ್ಲಿನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌್ ಎಲೆಕ್ಟ್ರಾನಿಕ್ಸ್‌ನ ಬಹುಮಹಡಿ ಕಟ್ಟಡದ ಎಸಿ ಸ್ಥಾವರದಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಟ್ಟಡ ಕುಸಿದ ಪರಿಣಾಮ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.