ADVERTISEMENT

ಬಿಜೆಪಿಗೆ ಬಹುಮತ: ಜಾವಡೇಕರ್‌ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2014, 10:03 IST
Last Updated 30 ಸೆಪ್ಟೆಂಬರ್ 2014, 10:03 IST

ಠಾಣೆ, ಮಹಾರಾಷ್ಟ್ರ (ಪಿಟಿಐ): ಮುಂದಿನ ತಿಂಗಳು ಮಹಾರಾಷ್ಟ್ರ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಮತ್ತು ಅವರ ಕೆಟ್ಟ ಆಡಳಿತದ ವಿರುದ್ಧ ಬಿಜೆಪಿಯ ಹೋರಾಟ ಎಂದಿದ್ದಾರೆ.

ಮಾಜಿ ಅಂಗ ಪಕ್ಷ ಶಿವಸೇನೆಯ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆಯೇ ಎಂಬ ಪ್ರಶ್ನೆಗೆ ಜಾವಡೇಕರ್‌, ‘ಕಾಂಗ್ರೆಸ್ ಹಾಗೂ ಎನ್‌ಸಿಪಿ ಮತ್ತು ಅವರ ಕೆಟ್ಟ ಆಡಳಿತದ ವಿರುದ್ಧ ನಮ್ಮ ಹೋರಾಟ’ ಎಂದು ಪ್ರತಿಕ್ರಿಯಿಸಿದ್ದಾರೆ.

ಶಿವಸೇನೆ ವಿರುದ್ಧ ಯಾವುದೇ ಹೇಳಿಕೆ ನೀಡದಿರಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಅವರು ತಿಳಿಸಿದೆ.

ADVERTISEMENT

ಪಕ್ಷದ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಪಕ್ಷಕ್ಕೆ ಬಹುಮತ ಸಿಗುವ ಹಾಗೂ ಬಹುಕಾಲದಿಂದ ಸಮಸ್ಯೆಗಳಲ್ಲಿ ಸಿಲುಕಿ  ರಾಜ್ಯದ ಜನತೆ  ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ’ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ, ‘ರಾಜ್ಯದ ಜನತೆಗೆ ಸೇವೆಯೇ ಅಧಿಕಾರದ ಚುಕ್ಕಾಣಿ ಹಿಡಿಯುವ ಏಕೈಕ ಉದ್ದೇಶವಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.