ADVERTISEMENT

ಬಿಜೆಪಿ–ಟಿಡಿಪಿ: ಮುರಿದು ಬಿದ್ದ ಮೈತ್ರಿ ಮಾತುಕತೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2014, 10:59 IST
Last Updated 30 ಮಾರ್ಚ್ 2014, 10:59 IST

ಹೈದರಾಬಾದ್‌ (ಪಿಟಿಐ); ತೆಲಂಗಾಣ ಭಾಗದಲ್ಲಿ ಬಿಜೆಪಿ ಮತ್ತು ಟಿಡಿಪಿ ನಡುವಿನ ಮೈತ್ರಿ ಮಾತುಕತೆ ಮುರಿದು ಬಿದಿದ್ದು ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಹಿರಿಯ ನಾಯಕರು ಭಾನುವಾರ ತಿಳಿಸಿದ್ದಾರೆ.

ತೆಲಂಗಾಣ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ (ಟಿಡಿಪಿ) ಪಕ್ಷದೊಂದಿಗೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿತ್ತು ಆದರೆ ಸ್ಥಾನ ಹೊಂದಣಿಕೆಯಲ್ಲಿ ಒಮ್ಮತಕ್ಕೆ ಬರಲಾಗದೇ ಮೈತ್ರಿ ಮುರಿದು ಬಿದ್ದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತೆಲಂಗಾಣ ಭಾಗದಲ್ಲಿನ 17 ಲೋಕ ಸಭಾ ಕ್ಷೇತ್ರಗಳ ಪೈಕಿ 11 ಸ್ಥಾನಗಳನ್ನು ಬಿಟ್ಟು ಕೊಡುವಂತೆ ಬಿಜೆಪಿ ಪಟ್ಟು ಹಿಡಿದಿತ್ತು. ಆದರೆ ಟಿಡಿಪಿ ಕೇವಲ 8 ಸ್ಥಾನಗಳನ್ನು ಬಿಟ್ಟು ಕೊಡುವುದಾಗಿ ಹೇಳಿತ್ತು. ಅಂತಿಮವಾಗಿ ಸ್ಥಾನ ಹೊಂದಾಣಿಕೆಯಾಗದೇ ಮೈತ್ರಿ ಮುರಿದು ಬಿದ್ದಿದೆ.
ತೆಲಂಗಾಣ ಭಾಗದಲ್ಲಿನ ಎಲ್ಲಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ  ಸ್ಪರ್ಧಿಸುವುದಾಗಿ ಬಿಜೆಪಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT