ADVERTISEMENT

ಬಿಜೆಪಿ–ಶಿವಸೇನೆ ಮೈತ್ರಿ ಮತ್ತಷ್ಟು ಕಗ್ಗಂಟು

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2014, 10:42 IST
Last Updated 15 ಸೆಪ್ಟೆಂಬರ್ 2014, 10:42 IST

ಮುಂಬೈ (ಪಿಟಿಐ); ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನಾ ನಡುವಿನ ಮೈತ್ರಿ ಮತ್ತಷ್ಟು ಕಗ್ಗಂಟಾಗಿದ್ದು  ಬಿಜೆಪಿ ಬೇಡಿಕೆಯನ್ನು ತಿರಸ್ಕರಿಸಿರುವ ಶಿವಸೇನೆ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು ನೀಡಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂದು ಬಿಜೆಪಿ ಬೇಡಿಕೆ ಇಟ್ಟಿದೆ. ಆದರೆ ಶೀವಸೇನೆ ವರಿಷ್ಠ ಉದ್ಧವ್‌ ಠಾಕ್ರೆ ಈ ಬೇಡಿಕೆಯನ್ನು ತಿರಸ್ಕರಿಸಿದ್ದು 117 ಸ್ಥಾನಗಳನ್ನು ನೀಡಲು ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.

ಇದರಿಂದ ಉಭಯ ಪಕ್ಷಗಳ ನಡುವಿನ ಮೈತ್ರಿ ಮತ್ತಷ್ಟು ಕಗ್ಗಂಟಾಗಿದೆ. ಈ ನಡುವೆ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಜೆಪಿಯ ವಕ್ತಾರ ಮಾಧವ್‌ ಭಂಡಾರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಲಾರೆ ಎಂದು ಉದ್ಧವ್‌ ತಿಳಿಸಿದ್ದಾರೆ.

ಬಿಜೆಪಿ ಜೊತೆ ಮಾತುಕತೆ ಮುರಿದು ಬಿದ್ದಿಲ್ಲ, ಸ್ಥಾನಗಳ ಹೊಂದಾಣಿಕೆ ಬಗ್ಗೆ ಕಸರತ್ತು ನಡೆಯುತ್ತಿದೆ ಎಂದು ಉದ್ಧವ್‌ ತಿಳಿಸಿದ್ದಾರೆ.

2009ರಲ್ಲಿ ಶಿವಸೇನೆ 169 ಮತ್ತು ಬಿಜೆಪಿ 119 ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT