ADVERTISEMENT

ಬಿಜೆಪಿ ಅಧ್ಯಕ್ಷರಾಗಿ ಅಮಿತ್‌ ಶಾ ನೇಮಕ ಸಾಧ್ಯತೆ ?

​ಪ್ರಜಾವಾಣಿ ವಾರ್ತೆ
Published 26 ಜೂನ್ 2014, 9:50 IST
Last Updated 26 ಜೂನ್ 2014, 9:50 IST

ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ಪರಮಾಪ್ತ ಅಮಿತ್‌ ಶಾ ಅವರನ್ನು ಈ ವಾರಾಂತ್ಯದೊಳಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಗುರುವಾರ ತಿಳಿಸಿದ್ದಾರೆ.

  ಮುಂಬರುವ ಜಾರ್ಖಂಡ್‌, ಮಹಾರಾಷ್ಟ್ರ, ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಮಿತ್‌ ಶಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿದು ಬಂದಿದೆ. 

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಉಸ್ತುವಾರಿ ಹೊತ್ತಿದ್ದ ಅಮಿತ್‌ ಶಾ ಅವರು ಬಿಜೆಪಿಗೆ 80 ಸ್ಥಾನಗಳ ಪೈಕಿ 71 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದರು.

ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಜೆ.ಪಿ.ನಡ್ಡಾ ಮತ್ತು ಓಂ ಪ್ರಕಾಶ್‌ ಮಾಥೂರ್‌ ಸಹ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT