ADVERTISEMENT

ಬಿಜೆಪಿ ಪ್ರಾಬಲ್ಯ ಮುಂದುವರಿಕೆ

ಮತಗಟ್ಟೆ ಸಮೀಕ್ಷೆ ಭವಿಷ್ಯ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 19:30 IST
Last Updated 23 ಏಪ್ರಿಲ್ 2017, 19:30 IST
ಬಿಜೆಪಿ ಪ್ರಾಬಲ್ಯ ಮುಂದುವರಿಕೆ
ಬಿಜೆಪಿ ಪ್ರಾಬಲ್ಯ ಮುಂದುವರಿಕೆ   

ನವದೆಹಲಿ: ದೆಹಲಿಯ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಪ್ರಾಬಲ್ಯ ಮುಂದುವರಿಯಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

ಎಎಪಿಗೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಆಗಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಮೂರು ಪಾಲಿಕೆಗಳಿಗೆ ಭಾನುವಾರ ನಡೆದ ಮತದಾನದ ನಂತರ ಸಮೀಕ್ಷೆಗಳ ಫಲಿತಾಂಶವನ್ನು ಪ್ರಸಾರ ಮಾಡಲಾಗಿದ್ದು, ಕಾಂಗ್ರೆಸ್ಸಿನ ಕುಸಿತ ಮುಂದುವರಿಯಲಿದೆ ಎಂದು ಅವು ಹೇಳಿವೆ. ದಕ್ಷಿಣ, ಪೂರ್ವ ಮತ್ತು ಉತ್ತರ ದೆಹಲಿ ಮಹಾನಗರ ಪಾಲಿಕೆಗಳ ಫಲಿತಾಂಶ ಬುಧವಾರ ಪ್ರಕಟವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.