ADVERTISEMENT

ಬಿಜೆಪಿ ವಿರುದ್ಧ ಕಾಂಗ್ರೆಸ್‌ ದೂರು

ಮತದಾನದ ದಿನ ಪ್ರಣಾಳಿಕೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2014, 19:30 IST
Last Updated 7 ಏಪ್ರಿಲ್ 2014, 19:30 IST

ನವದೆಹಲಿ (ಪಿಟಿಐ): ಅಯೋಧ್ಯೆ­ಯಲ್ಲಿ ರಾಮ ಮಂದಿರ ನಿರ್ಮಾಣದ ಭರವ­ಸೆಯ ಮೂಲಕ ಧರ್ಮದ ಹೆಸರಿನಲ್ಲಿ ಮತ ಯಾಚಿಸುವ ಚುನಾ­ವಣಾ ಪ್ರಣಾ­ಳಿಕೆಯನ್ನು ಮತದಾನದ ದಿನದಂದೇ ಬಿಡುಗಡೆ ಮಾಡಿ ಬಿಜೆಪಿ ಕಾನೂನನ್ನು ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ಸಲ್ಲಿಸಿದೆ.

ಮತದಾನದ ದಿನದಂದೇ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಜನ ಪ್ರಾತಿನಿಧ್ಯ ಕಾಯ್ದೆಯನ್ನು ಮತ್ತು ಆಯೋಗದ ಸೂಚನೆಯನ್ನು ಉಲ್ಲಂಘಿಸಿ­ರುವುದರಿಂದ ಸೂಕ್ತ ಕ್ರಮ ಜರುಗಿಸ­ಬೇಕು ಎಂದು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದೆ.

ಪ್ರಣಾಳಿಕೆಯಲ್ಲಿ ರಾಮ ಮಮದಿರ ನಿರ್ಮಾಣ ಮಾಡುವ ಪ್ರಸ್ತಾವದ ಮೂಲಕ ದೇಶದ ಜಾತ್ಯತೀತ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳಲಾಗಿದೆ ಎಂದೂ ದೂರಿನಲ್ಲಿ ಹೇಳಲಾಗಿದೆ. ಧರ್ಮ ಮತ್ತು ಧಾರ್ಮಿಕ ಸ್ಥಳಗಳ ಹೆಸರನ್ನು ಬಳಸಿ ಮತ ಯಾಚಿಸ­ಬಾರದು ಎಂದು ಚುನಾವಣೆ ಆಯೋ­ಗದ ನೀತಿ ಸಂಹಿತೆಯಲ್ಲಿ ಹೇಳಲಾ­ಗಿದ್ದರೂ ಅದನ್ನು ಬಿಜೆಪಿ ಉಲ್ಲಂಘಿಸಿದೆ ಎಂದು ಕಾಂಗ್ರೆಸ್‌ ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.