ADVERTISEMENT

ಬಿಜೆಪಿ-ಶಿವಸೇನೆ ಮೈತ್ರಿ ಅಂತ್ಯ?

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2014, 12:41 IST
Last Updated 25 ಸೆಪ್ಟೆಂಬರ್ 2014, 12:41 IST

ಮುಂಬೈ(ಪಿಟಿಐ): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉಂಟಾದ ಬಿಜೆಪಿ-ಶಿವಸೇನೆ ನಡುವಿನ ಬಿಕ್ಕಟ್ಟು 25 ವರ್ಷಗಳ ಸುದೀರ್ಘ ಮೈತ್ರಿಗೆ ಅಂತ್ಯ ಹಾಡಲಿದೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆ ಕುರಿತು ಪರಸ್ಪರ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಬಿಜೆಪಿ ಹೆಚ್ಚಿನ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಹೆಚ್ಚಿನ ಸ್ಥಾನಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಸೇನೆ ಬಿಜೆಪಿಯ ಬೇಡಿಕೆಯನ್ನು ತಳ್ಳಿಹಾಕಿದೆ.

ಎರಡು ಪಕ್ಷಗಳ ನಡುವಿನ ಇಲ್ಲಿಯ ವರೆಗಿನ ಕಾಲು ಶತಮಾನದ ಹೊಂದಾಣಿಕೆ ಮುರಿದುಕೊಂಡಿದೆ. ಈ ಬಗ್ಗೆ ಅಧಿಕೃತ ಘೊಷಣೆಯೊಂದೇ ಬಾಕಿ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಪರಸ್ಪರ ಮತುಕತೆ ಮೂಲಕ ಸ್ಥಾನ ಹಂಚಿಕೊಂಡಿದ್ದೇವೆ. ಹೊಂದಾಣಿಕೆ ಮುಂದುವರಿಸುತ್ತೇವೆ. ಸೇನೆ-ಬಿಜೆಪಿ ಜತೆಯಾಗಿ ಚುನಾವಣೆ ಎದುರಿಸಲಿವೆ ಎಂದು ಎರಡು ದಿನಗಳ ಹಿಂದೆಯಷ್ಟೇ ಘೋಷಣೆ ಮಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.