ಚೆನ್ನೈ (ಐಎಎನ್ಎಸ್): ಮಾಜಿ ಕೇಂದ್ರ ಸಚಿವ ಹಾಗೂ ಡಿಎಂಕೆ ಮುಖಂಡ ನೆಪೋಲಿಯನ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಸಮ್ಮುಖದಲ್ಲಿ ಭಾನುವಾರ ಬಿಜೆಪಿ ಸೇರಿದ್ದಾರೆ. ಯುಪಿಎ ಮೊದಲನೇ ಸರ್ಕಾರದಲ್ಲಿ ಸಚಿವರಾಗಿದ್ದ ನೆಪೋಲಿಯನ್, ಶನಿವಾರ ಡಿಎಂಕೆಗೆ ರಾಜೀನಾಮೆ ನೀಡಿದ್ದರು. ಇದೇ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಗಂಗೈ ಅಮರನ್ ಕೂಡ ಬಿಜೆಪಿ ಸೇರಿದರು.
ಸೋನಿಯಾ ಆರೋಗ್ಯದಲ್ಲಿ ಚೇತರಿಕೆ
ನವದೆಹಲಿ (ಐಎಎನ್ಎಸ್): ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆ ವೈದ್ಯರು ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಸೋನಿಯಾ ಅವರ ಆರೋಗ್ಯ ಸುಧಾರಿಸಿದ್ದು, ಸ್ಥಿರವಾಗಿದೆ. ಯಾವ ಸಮಸ್ಯೆಯೂ ಇಲ್ಲದೆಯೇ ಉಸಿರಾಟದ ವ್ಯಾಯಾಮದಲ್ಲಿ ತೊಡಗಿಕೊಂಡರು ಎಂದು ವೈದ್ಯರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.