ADVERTISEMENT

ಬಿಬಿಎಂಪಿ ಚುನಾವಣೆ ಅಕ್ಟೋಬರ್‌ನಲ್ಲಿ ?

8 ವಾರಗಳ ಕಾಲ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2015, 9:58 IST
Last Updated 3 ಜುಲೈ 2015, 9:58 IST

ನವದೆಹಲಿ:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಸುಪ್ರೀಂಕೋರ್ಟ್‌ 8 ವಾರಗಳ ಕಾಲ ಮುಂದೂಡಿದ್ದು, ಅಕ್ಟೋಬರ್‌ 5ರೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಶುಕ್ರವಾರ ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಚ್‌.ಎಲ್‌ ದತ್ತು ಅವರ ಪೀಠ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಿತು.

ಸುಪ್ರೀಂಕೋರ್ಟ್‌ ಚುನಾವಣೆ  ಮುಂದೂಡಿರುವುದರಿಂದ ರಾಜ್ಯ ಸರ್ಕಾರಕ್ಕೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಹೆಚ್ಚಿನ ಕಾಲಾವಕಾಶ ಸಿಕ್ಕಂತಾಗಿದೆ.

2011ರ ಜನಗಣತಿ ಪ್ರಕಾರ ವಾರ್ಡ್‌ಗಳ ಪುನರ್‌ವಿಂಗಡಣೆ  ಮತ್ತು ಮೀಸಲು ನಿಗದಿಯಾಗಬೇಕು ಎಂಬ ಅಂಶವನ್ನೇ ಮುಂದಿಟ್ಟುಕೊಂಡು  ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT