ADVERTISEMENT

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 17 ಮೇ 2014, 11:10 IST
Last Updated 17 ಮೇ 2014, 11:10 IST

ಪಟ್ನಾ (ಪಿಟಿಐ): ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿ ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದರು.

ಜೆಡಿಯು ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ನಿತೀಶ್‌ ಕುಮಾರ್‌ ರಾಜೀನಾಮೆ ನೀಡಿರುವುದಾಗಿ ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT