ADVERTISEMENT

ಬೆದರಿಕೆ ಕರೆ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2014, 16:23 IST
Last Updated 24 ಅಕ್ಟೋಬರ್ 2014, 16:23 IST

ಕೊಚ್ಚಿ, ಕೇರಳ (ಪಿಟಿಐ): ಅಕ್ಟೋಬರ್‌ 25ರಂದು ಮುಂಬೈ –ಕೊಚ್ಚಿ ನಡುವೆ ಮತ್ತು ಮುಂಬೈ– ಅಹಮದಾಬಾದ್‌ ನಡುವೆ ಹಾರಾಟ ನಡೆಸುವ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಸ್ಫೋಟ ಇಲ್ಲವೇ ಆತ್ಮಹತ್ಯಾ ದಾಳಿ ನಡೆಸಲಾಗುವುದು ಎಂಬ ಅನಾಮಿಕ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಈ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕೋಲ್ಕತ್ತದಲ್ಲಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ಗುರುವಾರ ರಾತ್ರಿ ಈ ಬೆದರಿಕೆ ಕರೆ ಬಂದಿದೆ. ಕೂಡಲೇ ಮುಂಬೈ, ಕೊಚ್ಚಿ ಮತ್ತು ಅಹಮದಾಬಾದ್‌ ವಿಮಾನ ನಿಲ್ದಾಣಗಳಿಗೆ ಭದ್ರತೆ ಬಿಗಿಗೊಳಿಸುವಂತೆ ಸೂಚನೆ ರವಾನಿಸಲಾಗಿದೆ.

‘ನಮಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ಬಂದಿದೆ’ ಎಂದು ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಎ.ಕೆ.ಸಿ.ನಾಯರ್‌ ಅವರು ಸುದ್ದಿ ಸಂಸ್ಥೆಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT