ADVERTISEMENT

ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬೇಡಿ: ಮೋದಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2014, 9:17 IST
Last Updated 22 ಏಪ್ರಿಲ್ 2014, 9:17 IST

ನವದೆಹಲಿ (ಐಎಎನ್‌ಎಸ್‌): ಪಕ್ಷದ ಮುಖಂಡರು ಮತ್ತು ಹಿತೈಷಿಗಳು ನೀಡುವ ಬೇಜವಾಬ್ದಾರಿ ಹೇಳಿಕೆಗಳನ್ನು ಒಪ್ಪಲಾಗದು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಪ್ರವೀಣ್‌ ತೊಗಾಡಿಯ ಮತ್ತು ಬಿಜೆಪಿಯ ಗಿರಿರಾಜ್‌ ಸಿಂಗ್‌ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸುತ್ತ ಇನ್ನು ಮುಂದೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡದಂತೆ ಮುಖಂಡರು ಮತ್ತು ಹಿತೈಷಿಗಳಲ್ಲಿ ಮನವಿ ಮಾಡುವುದಾಗಿ ಮೋದಿ ತಿಳಿಸಿದರು.

ದೇಶದ ಜನರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮನಸ್ಸನ್ನು ಘಾಸಿಗೊಳಿಸಬೇಡಿ ಎಂದು ಮೋದಿ ಮುಖಂಡರಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.