ADVERTISEMENT

ಭಿನ್ನ ನಿಲುವು: ಒಮ್ಮತದ ತೀರ್ಪು

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 19:30 IST
Last Updated 22 ಆಗಸ್ಟ್ 2017, 19:30 IST
ಭಿನ್ನ ನಿಲುವು: ಒಮ್ಮತದ ತೀರ್ಪು
ಭಿನ್ನ ನಿಲುವು: ಒಮ್ಮತದ ತೀರ್ಪು   

ನವದೆಹಲಿ: ವಿವಾದಿತ ತ್ರಿವಳಿ ತಲಾಖ್‌ಗೆ ಸಂಬಂಧಿಸಿದಂತೆ ಐವರು ನ್ಯಾಯಮೂರ್ತಿಗಳ ಭಿನ್ನ ನಿಲುವಿನ ಹೊರತಾಗಿಯೂ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಮಂಗಳವಾರ ಈ ಪದ್ಧತಿಯನ್ನು ರದ್ದುಗೊಳಿಸುವ ತೀರ್ಪು ನೀಡಿದೆ.

ಸಂವಿಧಾನ ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳು ವಿಭಿನ್ನ ನಂಬುಗೆ ಮತ್ತು ಧಾರ್ಮಿಕ ಹಿನ್ನೆಲೆಯಿಂದ ಬಂದಿದ್ದರೂ ಈ ಪದ್ಧತಿ ಕೊನೆಗೊಳಿಸುವ ಆದೇಶ ಹೊರಡಿಸಿದ್ದಾರೆ.

ಸಿಖ್‌ ಧರ್ಮಕ್ಕೆ ಸೇರಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಿದ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರು ತ್ರಿವಳಿ ತಲಾಖ್ ಮಾನ್ಯತೆ ಎತ್ತಿಹಿಡಿದರು. ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ರೋಹಿಂಗ್ಟನ್ ನಾರಿಮನ್‌ ಮತ್ತು ಉದಯ್ ಲಲಿತ್ ಅವರು ತ್ರಿವಳಿ ತಲಾಖ್ ಸಂವಿಧಾನ ಬಾಹಿರ ಎಂದು ಅಭಿಪ್ರಾಯಪಟ್ಟರು.

ADVERTISEMENT

ಕುರಿಯನ್‌ ಜೋಸೆಫ್‌ ಕ್ರೈಸ್ತರಾದರೆ, ಯು.ಯು. ಲಲಿತ್‌ ಅವರು ಹಿಂದು. ರೋಹಿಂಗ್ಟನ್‌ ಎಫ್‌. ನಾರಿಮನ್‌ ಜೋರಾಸ್ಟ್ರಿಯನ್‌ ಧರ್ಮಕ್ಕೆ ಸೇರಿದವರು. ಬಹುಮತದ (3:2) ತೀರ್ಪಿನ ಆಧಾರದ ಮೇಲೆ ಸುಪ್ರೀಂಕೋರ್ಟ್‌ ತ್ರಿವಳಿ ತಲಾಖ್ ರದ್ದುಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.