ADVERTISEMENT

ಮಣಿಪುರ ಯುವಕನ ಹತ್ಯೆ: ಆರೋಪಿಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2014, 19:30 IST
Last Updated 22 ಜುಲೈ 2014, 19:30 IST

ನವದೆಹಲಿ (ಪಿಟಿಐ): ಮಣಿಪುರದ ಯುವಕ ಅಖಾ ಸಲೌನಿ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯ ಎರಡು ದಿನಗಳ ಕಾಲ (ಇದೇ 24ರವರೆಗೆ) ಪೊಲೀಸರ ವಶಕ್ಕೆ ಒಪ್ಪಿಸಿದೆ.

ಶಕ್ತಿ ಬಸೋಯಾ (21), ಈತನ ಸಂಬಂಧಿ ಸಂಜಯ್‌ ಬಸೋಯಾ (24) ಮತ್ತು ರಾಜೀವ್ (25) ಅವರನ್ನು ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.