ADVERTISEMENT

ಮಮತಾ ಸರ್ಕಾರದ ಆದೇಶ ತೆರವುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌: ಮೊಹರಂ ದಿನದಂದೂ ದುರ್ಗಾ ಮೂರ್ತಿ ವಿಸರ್ಜನೆಗೆ ಅವಕಾಶ

ಏಜೆನ್ಸೀಸ್
Published 21 ಸೆಪ್ಟೆಂಬರ್ 2017, 11:40 IST
Last Updated 21 ಸೆಪ್ಟೆಂಬರ್ 2017, 11:40 IST
– ಸಾಂದರ್ಭಿಕ ಚಿತ್ರ
– ಸಾಂದರ್ಭಿಕ ಚಿತ್ರ   

ಕೋಲ್ಕತ್ತಾ: ದುರ್ಗಾ ಪೂಜೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರ ನೀಡಿದ್ದ ಆದೇಶವನ್ನು ತೆರವುಗೊಳಿಸಿರುವ ಕಲ್ಕತ್ತಾ ಹೈಕೋರ್ಟ್‌ ಮೊಹರಂ ದಿನದಂದೂ ದುರ್ಗಾ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಿದೆ.

ಮೊಹರಂ ದಿನವೂ ಸೇರಿದಂತೆ ಎಲ್ಲಾ ದಿನಗಳಲ್ಲೂ ದುರ್ಗಾ ಮೂರ್ತಿಯನ್ನು ರಾತ್ರಿ 12 ಗಂಟೆಯವರೆಗೆ ವಿಸರ್ಜನೆ ಮಾಡಲು ಹೈಕೋರ್ಟ್‌ ಅವಕಾಶ ಕಲ್ಪಿಸಿದೆ. ಅಲ್ಲದೆ, ಸರ್ಕಾರ ಈ ರೀತಿಯ ಆದೇಶ ನೀಡುವುದು ಸರಿಯಲ್ಲ ಎಂದು ಹೈಕೋರ್ಟ್‌ ಹೇಳಿದೆ.

ದುರ್ಗಾ ಮೂರ್ತಿ ಮೆರವಣಿಗೆ ಹಾಗೂ ಮೊಹರಂ ಮೆರವಣಿಗೆಗಳಿಗೆ ಸೂಕ್ತ ರೀತಿಯಲ್ಲಿ ಮಾರ್ಗ ನಿಗದಿಪಡಿಸುವಂತೆ ನ್ಯಾಯಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ.

ADVERTISEMENT

ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದಂತೆ ಜನಸಾಮಾನ್ಯರ ಹಕ್ಕುಗಳನ್ನು ರಾಜ್ಯ ಸರ್ಕಾರ ಕಸಿದುಕೊಳ್ಳಬಾರದು ಎಂದಿರುವ ಹೈಕೋರ್ಟ್‌ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.