ADVERTISEMENT

ಮರಣೋತ್ತರ ಪರೀಕ್ಷೆಗೆ ಬಾಲಕಿ ಅಪ್ಪ ಅಸ್ತು

​ಪ್ರಜಾವಾಣಿ ವಾರ್ತೆ
Published 3 ಮೇ 2015, 12:44 IST
Last Updated 3 ಮೇ 2015, 12:44 IST

ಮೋಗಾ, ಪಂಜಾಬ್ (ಪಿಟಿಐ): ಪಂಜಾಬ್‌ ಮುಖ್ಯಮಂತ್ರಿ ಪ್ರಕಾಶ್‌ ಸಿಂಗ್‌ ಬಾದಲ್‌ ಕುಟುಂಬಕ್ಕೆ ಸೇರಿದ ಬಸ್‌ನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಬಾಲಕಿಯ ಮರಣೋತ್ತರ ಪರೀಕ್ಷೆಗೆ ಅವರ ತಂದೆ ಒಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ನಾಲ್ಕು ದಿನಗಳ ಬಳಿಕ ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ದೊರೆತಿದೆ.

‘ಬಾಲಕಿಯ ಮರಣೋತ್ತರ ಪರೀಕ್ಷೆಗೆ ಅವರ ತಂದೆ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಪೊಲೀಸ್ ವಕ್ತಾರೊಬ್ಬರು ಭಾನುವಾರ  ಇಲ್ಲಿ ತಿಳಿಸಿದ್ದಾರೆ.

ಆರ್ಬಿಟ್‌ ಬಸ್‌ ಸಂಸ್ತೆಯ ಸಹ ಮಾಲೀಕರವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಸಂಸ್ಥೆ ಪರವಾನಗಿ ರದ್ದು ಪಡಿಸುವ ತನಕ ಬಾಲಕಿಯ ಸಂಸ್ಕಾರ ನಡೆಸಲು ಅವರ ಕುಟುಂಬ ನಿರಾಕರಿಸಿದ್ದರಿಂದ ಬಾಲಕಿಯ ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ.

ಆರ್ಬಿಟ್ ಬಸ್‌ ಸಂಸ್ಥೆಯು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಕುಟುಂಬಕ್ಕೆ ಸೇರಿದ್ದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.