ADVERTISEMENT

ಮಸೂದೆಗೆ ರಾಷ್ಟ್ರಪತಿ ಅಂಕಿತ: ಸಿಬಿಐ ಮುಖ್ಯಸ್ಥ ಆಯ್ಕೆ ಇಂದು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2014, 19:30 IST
Last Updated 1 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ): ಸಿಬಿಐ ಮುಖ್ಯಸ್ಥರ ಆಯ್ಕೆ ಸಮಿತಿಯಲ್ಲಿ  ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕ ಭಾಗಿಯಾಗಬಹುದು ಎಂಬ ಮಸೂದೆಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅಂಕಿತ ಹಾಕಿದ್ದು, ಹೊಸ ಸಿಬಿಐ ಮುಖ್ಯಸ್ಥರ ಆಯ್ಕೆಗೆ ಹಾದಿ ಸುಗಮವಾದಂತಾಗಿದೆ.

ಸಿಬಿಐ ಮುಖ್ಯಸ್ಥ ರಂಜಿತ್‌ ಸಿನ್ಹಾ ಮಂಗಳವಾರ ನಿವೃತ್ತರಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಲೋಕ ಸಭೆಯ ಅತಿದೊಡ್ಡ ವಿರೋಧ ಪಕ್ಷದ (ಕಾಂಗ್ರೆಸ್‌) ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಹಾಗೂ ಮುಖ್ಯ ನ್ಯಾಯಮೂರ್ತಿ ಎಚ್‌. ಎಲ್‌. ದತ್ತು ಅಥವಾ ಅವರು ಸೂಚಿಸಿರುವ ಯಾವುದೇ ನ್ಯಾಯಮೂರ್ತಿ ಸಿಬಿಐನ ಹೊಸ ಮುಖ್ಯಸ್ಥರನ್ನು ಮಂಗಳವಾರ ಆಯ್ಕೆ ಮಾಡಲಿದ್ದಾರೆ.

ಸಿಬಿಐ ಮುಖ್ಯಸ್ಥರ ಆಯ್ಕೆಯಲ್ಲಿ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕಳೆದ ವಾರ ದೆಹಲಿ ವಿಶೇಷ ಪೊಲೀಸ್‌ ಸ್ಥಾಪನಾ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.