ADVERTISEMENT

ಮಹಾದಾಯಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ಅನಂತ ಕುಮಾರ್

​ಪ್ರಜಾವಾಣಿ ವಾರ್ತೆ
Published 30 ಜುಲೈ 2016, 9:26 IST
Last Updated 30 ಜುಲೈ 2016, 9:26 IST
ಅನಂತ್ ಕುಮಾರ್
ಅನಂತ್ ಕುಮಾರ್   

ನವದೆಹಲಿ: ಮಹಾದಾಯಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ  ಕರ್ನಾಟಕಕ್ಕೆ ಹಿನ್ನಡೆಯಾಗಿದೆ ನಿಜ. ಆದರೆ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಅಂತಿಮವಲ್ಲ. ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ  ಎಂದಿದ್ದಾರೆ.

ಯಾವುದೇ ಕಾರಣಕ್ಕೂ ನಾವು ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕರ್ನಾಟಕದ ಪಾಲಿನ ನೀರನ್ನು ಪಡೆಯಲು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತೇವೆ. ಮಹದಾಯಿ ವಿಚಾರವಾಗಿ ನಾವೇನು ಸುಮ್ಮನೆ ಕುಳಿತಿಲ್ಲ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುತ್ತಿದ್ದು, ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡುತ್ತೇವೆ. ವರ್ಷಗಳಿಂದ ನಡೆಯುತ್ತಿರುವ ರೈತರು ಹೋರಾಟವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಯಮನೂರು ಮತ್ತು ಗೌಡರ ಓಣಿ ಗ್ರಾಮಗಳಲ್ಲಿ ನಡೆದ  ಪೊಲೀಸ್ ದೌರ್ಜನ್ಯವನ್ನು ಖಂಡಿಸಿದ ಅನಂತ್ ಕುಮಾರ್ ಅವರು, ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಯಾರೂ ಮಾಡಬಾರದು. ರೈತರ ಮೇಲಿನ ಹಲ್ಲೆ ಖಂಡನೀಯ. ಈ ಬಗ್ಗೆ ರಾಜ್ಯ ಸರಕಾರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT