ADVERTISEMENT

ಮಹಾರಾಷ್ಟ್ರ: ಖಾತೆ ಹಂಚಿಕೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2014, 12:52 IST
Last Updated 2 ನವೆಂಬರ್ 2014, 12:52 IST

ಮುಂಬೈ(ಪಿಟಿಐ): ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನೂತನ ಸರ್ಕಾರದ 10 ಸಚಿವರಿಗೆ ಭಾನುವಾರ ಖಾತೆ ಹಂಚಿಕೆ ಮಾಡಿದ್ದು, ಗೃಹ, ನಗರಾಭಿವೃದ್ಧಿ, ಆರೋಗ್ಯ ಸೇರಿದಂತೆ ಪ್ರಮುಖ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಬಿಜೆಪಿ ನಾಯಕ ಏಕಾಂತ್ ಖಾಡ್ಸೆ ಅವರಿಗೆ ಕಂದಾಯ, ಅಲ್ಪಸಂಖ್ಯಾತರ ಅಭಿವೃದ್ಧಿ, ಮತ್ತು ವಕ್ಫ್, ಕೃಷಿ, ಪಶುಸಂಗೋಪನೆ, ಅಬಕಾರಿ ಹಾಗೂ ಹೈನು ಮತ್ತು ಮೀನುಗಾರಿಕೆ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ ಎನ್ನಲಾಗಿದ್ದು, ಅಧಿಕೃತವಾಗಿ ಇನ್ನಷ್ಟೇ ಹೊರ ಬೀಳಬೇಕಿದೆ.

ವಿನೋದ್ ತಾವ್ಡೆ ಪ್ರಾಥಮಿಕ ಶಿಕ್ಷಣ ಮತ್ತು ಕ್ರೀಡೆ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಮರಾಠಿ ಭಾಷೆ ಮತ್ತು ಸಂಸ್ಕೃತಿ ಖಾತೆಗಳನ್ನು ನೀಡಲಾಗಿದೆ.

ಮುಂಬೈನ ಪ್ರಕಾಶ್ ಮೆಹ್ತಾ ಅವರಿಗೆ ಕೈಗಾರಿಕೆ ಮತ್ತು ಗಣಿ, ಸಂಸದೀಯ ವ್ಯವಹಾರ ಖಾತೆ ನೀಡಲಾಗಿದೆ.
ಚಂದ್ರಕಾಂತ್ ಪಾಟೀಲ್ ಅವರಿಗೆ ಮಾರುಕಟ್ಟೆ ಮತ್ತು ಜವಳಿ, ಸಾರ್ವಜನಿಕ ಅಭಿವೃದ್ಧಿ ಖಾತೆ ನೀಡಲಾಗಿದೆ. ಪಂಕಜ್ ಮುಂಡೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಜಲ ಸಂರಕ್ಷಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ನೀಡಲಾಗಿದೆ.

ವಿಷ್ಣುಸವಾರ ಅವರಿಗೆ ಬುಡಕಟ್ಟು ಜನಾಗ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ವಿಶೇಷ ಸಹಾಯಕ ಖಾತೆಗಳನ್ನು ಮುಖ್ಯಮಂತ್ರಿ ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.