ADVERTISEMENT

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ದೂರಿಗೆ ಆನ್‌ಲೈನ್ ಪೋರ್ಟಲ್

ಪಿಟಿಐ
Published 24 ಜುಲೈ 2017, 19:30 IST
Last Updated 24 ಜುಲೈ 2017, 19:30 IST
ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ  ದೂರಿಗೆ  ಆನ್‌ಲೈನ್ ಪೋರ್ಟಲ್
ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ದೂರಿಗೆ ಆನ್‌ಲೈನ್ ಪೋರ್ಟಲ್   

ನವದೆಹಲಿ: ಕೇಂದ್ರ ಸರ್ಕಾರದ ಮಹಿಳಾ ನೌಕರರು ಕೆಲಸದ ಸ್ಥಳದಲ್ಲಿ ತಮ್ಮ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಕುರಿತು ದೂರು ನೀಡಲು ನೆರವಾಗುವ ಆನ್‌ಲೈನ್ ಪೋರ್ಟಲ್‌ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಸೋಮವಾರ ಚಾಲನೆ ನೀಡಿದೆ.

‘SHe-box’ (ಸೆಕ್ಷುವಲ್ ಹೆರಾಸ್ಮೆಂಟ್ ಎಲೆಕ್ಟ್ರಾನಿಕ್ ಬಾಕ್ಸ್) ಅನ್ನು ಸೂಕ್ತವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

‘ಮುಂದಿನ ದಿನಗಳಲ್ಲಿ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೂ ಈ ಸೇವೆ ವಿಸ್ತರಿಸಲಿದ್ದೇವೆ’ ಎಂದು ಮೇನಕಾ ಹೇಳಿದ್ದಾರೆ.

ADVERTISEMENT

‘ಉದ್ಯೋಗದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಸ್ವರೂಪ ಹಾಗೂ ತೀವ್ರತೆಯನ್ನು ತಿಳಿಯಲು ಸದ್ಯದಲ್ಲೇ ರಾಷ್ಟ್ರೀಯ ಸಮೀಕ್ಷೆ ಕೈಗೊಳ್ಳಲಾಗುತ್ತದೆ’ ಎಂದು ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.

ಇಂತಹ ಆನ್‌ಲೈನ್ ಪೋರ್ಟಲ್ ಆರಂಭಿಸುವಂತೆ ಸಲಹೆಗಳು ಬಂದ ಕಾರಣ, ಸಚಿವಾಲಯವು ಕಳೆದ ಅಕ್ಟೋಬರ್‌ನಲ್ಲಿ ಪೋರ್ಟಲ್ ರಚಿಸಲು ನಿರ್ಧರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.