ADVERTISEMENT

‘ಮಹಿಳಾ ಶಕ್ತಿ ಕೇಂದ್ರಗಳ’ ಸ್ಥಾಪನೆಗೆ ಕೇಂದ್ರ ಸಂಪುಟ ಒಪ್ಪಿಗೆ

ಪಿಟಿಐ
Published 22 ನವೆಂಬರ್ 2017, 19:30 IST
Last Updated 22 ನವೆಂಬರ್ 2017, 19:30 IST

ನವದೆಹಲಿ: ದೇಶದ ಅತ್ಯಂತ ಹಿಂದುಳಿದ 115 ಜಿಲ್ಲೆಗಳಲ್ಲಿ ‘ಮಹಿಳಾ ಶಕ್ತಿ ಕೇಂದ್ರ’ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಗ್ರಾಮೀಣ ಪ್ರದೇಶಗಳ ಮಹಿಳೆಯರ ಕೌಶಲ ಅಭಿವೃದ್ಧಿ, ಉದ್ಯೋಗ, ಡಿಜಿಟಲ್‌ ಸಾಕ್ಷರತೆ ಮತ್ತು ಆರೋಗ್ಯ ಸುಧಾರಣೆ ‘ಮಹಿಳಾ ಶಕ್ತಿ ಕೇಂದ್ರ’ಗಳ ಸ್ಥಾಪನೆಯ ಪ್ರಮುಖ ಉದ್ದೇಶವಾಗಿದೆ.

ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು 14 ಅಂಗನವಾಡಿ ಕೇಂದ್ರಗಳಲ್ಲಿ ‘ಮಹಿಳಾ ಶಕ್ತಿ ಕೇಂದ್ರ’ ಸ್ಥಾಪಿಸುವ ಬಗ್ಗೆ ಘೋಷಿಸಿದ್ದರು. ಇದಕ್ಕಾಗಿ ಪ್ರಸಕ್ತ ಬಜೆಟ್‌ನಲ್ಲಿ ₹ 500 ಕೋಟಿ ನೀಡಿದ್ದರು.

ADVERTISEMENT

ಅತ್ಯಂತ ಹಿಂದುಳಿದ 115 ಜಿಲ್ಲೆಗಳಲ್ಲಿ ಬ್ಲಾಕ್‌ ಮಟ್ಟದಲ್ಲಿ 920 ‘ಮಹಿಳಾ ಶಕ್ತಿ ಕೇಂದ್ರ’ ಸ್ಥಾಪನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಸ್ಥಳೀಯ ಕಾಲೇಜುಗಳ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಎನ್‌ಎಸ್‌ಎಸ್‌ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳನ್ನೂ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಭೇಟಿ ಬಚಾವೋ ಭೇಟಿ ಪಡಾವೋ’ ಯೋಜನೆಯನ್ನು 161ರಿಂದ 640 ಜಿಲ್ಲೆಗಳಿಗೆ ವಿಸ್ತರಿಸಲು ಕೇಂದ್ರ ಒಪ್ಪಿದೆ. ಲೈಂಗಿಕ ಕಿರುಕುಳಕ್ಕೆ ಗುರಿಯಾದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯಗಳನ್ನು ನೀಡುವ ಇನ್ನೂ 150 ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.