ADVERTISEMENT

ಮಾನನಷ್ಟ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 4 ಜೂನ್ 2014, 10:11 IST
Last Updated 4 ಜೂನ್ 2014, 10:11 IST

ನವದೆಹಲಿ (ಪಿಟಿಐ): ಮಾನನಷ್ಟ ಮೊಕದ್ದಮೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಮತ್ತು ಯೋಗೇಂದ್ರ ಯಾದವ್ ಅವರಿಗೆ ದೆಹಲಿ ಕೋರ್ಟ್ ಬುಧವಾರ ಜಾಮೀನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಮತ್ತು ಯೋಗೇಂದ್ರ ಯಾದವ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ  ಮೂವರೂ ಇಂದು ನ್ಯಾಯಾಲಯದ ಎದುರು ಹಾಜರಾದರು.

ನ್ಯಾಯಾಲಯವು ಈ ಮೂವರಿಂದ 10 ಸಾವಿರ ಮೌಲ್ಯದ ವೈಯಕ್ತಿಕ ಬಾಂಡ್ ಅನ್ನು ಪಡೆದು ಜಾಮೀನು ನೀಡಿದ್ದು, ಆಗಸ್ಟ್ 6ಕ್ಕೆ ವಿಚಾರಣೆ ನಿಗದಿಪಡಿಸಿದೆ.

ADVERTISEMENT

ದೆಹಲಿಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ನೀಡುವುದಾಗಿ ಹೇಳಿ ತಮ್ಮ ವಿರುದ್ಧ ಪಿತೂರಿ ನಡೆಸಿ ವಂಚಿಸಿದ್ದಾರೆ ಎಂದು ದೂರಿ ವಕೀಲ ಸುರೇಂದ್ರ ಕುಮಾರ್ ಶರ್ಮಾ ಎಂಬುವವರು ಮೂವರ ವಿರುದ್ಧ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳು ವಂಚನೆ ಮತ್ತು ಅಪರಾಧಿಕ ಪಿತೂರಿ ನಡೆಸಿದ್ದಾರೆ ಎಂಬುದಕ್ಕೆ ಯಾವುದೇ ಪ್ರಾಥಮಿಕ ದಾಖಲೆಗಳಿಲ್ಲ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.