ADVERTISEMENT

ಮುಂಬೈ: ಅಗ್ನಿ ಆಕಸ್ಮಿಕ 8 ಸಾವು

​ಪ್ರಜಾವಾಣಿ ವಾರ್ತೆ
Published 30 ಜೂನ್ 2016, 8:57 IST
Last Updated 30 ಜೂನ್ 2016, 8:57 IST
ಮುಂಬೈ: ಅಗ್ನಿ ಆಕಸ್ಮಿಕ 8 ಸಾವು
ಮುಂಬೈ: ಅಗ್ನಿ ಆಕಸ್ಮಿಕ 8 ಸಾವು   

ಮುಂಬೈ: ಇಲ್ಲಿನ ಅಂಧೇರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಅನಾಹುತದಲ್ಲಿ ಹಸುಗೂಸು ಸೇರಿದಂತೆ 8 ಜನರು ಸಜೀವವಾಗಿ ದಹನಗೊಂಡಿದ್ದಾರೆ.

ಇಲ್ಲಿನ ಮೆಡಿಕಲ್‌ ಸ್ಟೋರ್‌ನಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡ ನಂತರ  ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಈ ದುರಂತ ಜರುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ 8 ಜನರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ  ಆಗಮಿಸಿದ  ಆಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.