ADVERTISEMENT

ಮುಖ್ಯ ಮಾಹಿತಿ ಆಯುಕ್ತ ಆಯ್ಕೆ ಸಮಿತಿಗೆ ಖರ್ಗೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2014, 20:21 IST
Last Updated 3 ನವೆಂಬರ್ 2014, 20:21 IST

ನವದೆಹಲಿ (ಪಿಟಿಐ): ಮುಖ್ಯ ಮಾಹಿತಿ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಿ ನೇತೃತ್ವದ  ಮೂವರು ಸದಸ್ಯರ ಆಯ್ಕೆ ಸಮಿತಿಗೆ ಲೋಕಸಭೆಯಲ್ಲಿ  ಕಾಂಗ್ರೆಸ್‌ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಆಯ್ಕೆ ಸಮಿತಿಯಲ್ಲಿದ್ದಾರೆ.
ಪ್ರಧಾನಿ ನೇತೃತ್ವದ ಸಮಿತಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಪ್ರಧಾನಿ ಸೂಚಿಸಿದ ಸಂಪುಟ ದರ್ಜೆಯ ಸಚಿವರೊಬ್ಬರು  ಸದಸ್ಯರಾಗಿರುತ್ತಾರೆ.

ಇದುವರೆಗೂ ಲೋಕಸಭೆಯ ಅಧಿಕೃತ ವಿರೋಧಪಕ್ಷದ ನಾಯಕನ ಸ್ಥಾನಮಾನ ತೀರ್ಮಾನವಾಗದ ಕಾರಣ ಏಕೈಕ ಅತಿ ದೊಡ್ಡ ವಿರೋಧ ಪಕ್ಷದ ನಾಯಕನನ್ನು ಸಮಿತಿ ಸದಸ್ಯನನ್ನಾಗಿ ನೇಮಕ ಮಾಡುವಂತೆ ಕಾನೂನು ಸಚಿವಾಲಯ ಶಿಫಾರಸು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.