ADVERTISEMENT

ಮುಸ್ಲಿಂ ಮಹಿಳೆಗೆ ಲಿಂಗ ತಾರತಮ್ಯ: ಸುಪ್ರೀಂ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2015, 19:34 IST
Last Updated 24 ನವೆಂಬರ್ 2015, 19:34 IST

ನವದೆಹಲಿ (ಪಿಟಿಐ): ಮುಸ್ಲಿಂ ಮಹಿಳೆ, ವಿಚ್ಛೇದನ ಮತ್ತು ತಮ್ಮ ಪತಿಯ ಇತರ ವಿವಾಹಗಳಿಂದ ಲಿಂಗ ತಾರತಮ್ಯಕ್ಕೆ ಒಳಗಾಗುತ್ತಿದ್ದಾಳೆಯೇ ಎಂಬುದನ್ನು ಸುಪ್ರೀಂಕೋರ್ಟ್ ಅವಲೋಕಿಸಲಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಸ್ವಯಂ ದೂರು ದಾಖಲಿಸಿಕೊಂಡಿರುವ ಕೋರ್ಟ್, ಮೂರು ವಾರಗಳ ಬಳಿಕ ವಿಚಾರಣೆ ನಡೆಸಲು ಅಂಗೀಕರಿಸಿದೆ. 

ಮುಸ್ಲಿಂ ಮಹಿಳೆಯರು ಲಿಂಗ ತಾರತಮ್ಯ ಎದುರಿಸುತ್ತಿರುವ ಬಗ್ಗೆ ವಿಚಾರಣೆ ನಡೆಸಲು ಸೂಕ್ತ ಪೀಠವನ್ನು ರಚಿಸುವಂತೆ ನ್ಯಾಯಮೂರ್ತಿ ಎ.ಆರ್. ದವೆ ನೇತೃತ್ವದ ಪೀಠ ಕೋರಿದ ಮೇರೆಗೆ ಮುಖ್ಯ ನ್ಯಾಯಮೂರ್ತಿ ಎಚ್‌.ಎಲ್. ದತ್ತು ಮತ್ತು ನ್ಯಾ. ಅಮಿತವ್ ರಾಯ್ ನೇತೃತ್ವದ ಪೀಠವನ್ನು ಸ್ಥಾಪಿಸಲಾಗಿತ್ತು.

ತ್ವರಿತ ವಿಚಾರಣೆಗೆ ನಕಾರ: ತಾನು ಬ್ರಿಟಿಷ್‌ ಪ್ರಜೆ ಎಂದು ಹೇಳಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ದೂರು ದಾಖಲಿಸಲು ಸಿಬಿಐಗೆ ನಿರ್ದೇಶನ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.