ADVERTISEMENT

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು

ಗುಜರಾತ್‌ ವಿಧಾನಸಭೆ ಉಪಚುನಾವಣೆ

​ಪ್ರಜಾವಾಣಿ ವಾರ್ತೆ
Published 17 ಮೇ 2014, 19:30 IST
Last Updated 17 ಮೇ 2014, 19:30 IST

ಅಹಮದಾಬಾದ್‌: ಗುಜರಾತ್‌ನ ಏಳು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 4 ಮತ್ತು ಕಾಂಗ್ರೆಸ್‌ 3ರಲ್ಲಿ ಜಯ ಗಳಿಸಿದೆ.

ಮೋದಿ ಅಲೆಗೆ ದೇಶದಾದ್ಯಂತ  ಕಾಂಗ್ರೆಸ್‌ ಕೊಚ್ಚಿ ಹೋಗಿದೆ. ಗುಜರಾತ್‌ನ ಎಲ್ಲ 26 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಿದೆ. ಇಷ್ಟೆಲ್ಲದರ ಮಧ್ಯೆಯೂ ಕಾಂಗ್ರೆಸ್‌ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗುವ ಗುಜರಾತ್‌ನ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜಯ ಸಾಧಿಸಿರುವುದು ಅಚ್ಚರಿ ಮೂಡಿಸಿದೆ.

ರಾಜ್ಯಗಳ ಉಪಚುನಾವಣೆ ಫಲಿತಾಂಶ
ಪಶ್ಚಿಮ ಬಂಗಾಳದ ಆರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 5ರಲ್ಲಿ ಟಿಎಂಸಿ ಮತ್ತು ಆರ್‌ಎಸ್‌ಪಿ 1ರಲ್ಲಿ ಜಯ ಕಂಡಿದೆ.

ಮಹಾರಾಷ್ಟ್ರದ ಒಂದು ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಉತ್ತರ ಪ್ರದೇಶದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 2, ಕಾಂಗ್ರೆಸ್‌ ಮತ್ತು ಆಪ್ನ ದಳ ತಲಾ 1ರಲ್ಲಿ ಜಯ ಸಾಧಿಸಿವೆ.

ತಮಿಳುನಾಡಿನ  ಒಂದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಜಯಭೇರಿ ಬಾರಿಸಿದೆ. ಮಿಜೋರಂನ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.