ADVERTISEMENT

ಮೇ 20ರಂದು ಮೋದಿ ಸಂಸದೀಯ ನಾಯಕನಾಗಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2014, 10:55 IST
Last Updated 17 ಮೇ 2014, 10:55 IST

ನವದೆಹಲಿ (ಪಿಟಿಐ): ಇದೇ 20ರಂದು ಬಿಜೆಪಿಯು ಸಂಸದೀಯ ಮಂಡಳಿ ಸಭೆ ನಡೆಸಿ ನರೇಂದ್ರ ಮೋದಿ ಅವರನ್ನು ಸಂಸದೀಯ ನಾಯಕನಾಗಿ ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ  ತಿಳಿಸಿದೆ.

ಈ ಮಹತ್ವದ ಸಭೆಯಲ್ಲಿ ಎಲ್‌.ಕೆ. ಅಡ್ವಾಣಿ, ಸುಷ್ಮಾಸ್ವರಾಜ್‌, ಮುರಳಿ ಮನೋಹರ್‌ ಜೋಶಿ, ಅರುಣ್‌ ಜೇಟ್ಲಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದು, ಮೋದಿ ಅವರನ್ನು ಸಂಸದೀಯ ನಾಯಕನಾಗಿ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ  ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಪ್ರಮಾಣ ವಚನಕ್ಕೆ ಯಾವುದೇ ದಿನಾಂಕವನ್ನು ನಿಗದಿ ಮಾಡಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಪಕ್ಷದ ಸಂಸದೀಯ ಮಂಡಳಿ ಸಭೆ ನಡೆದ ಬಳಿಕ ಎನ್‌ಡಿಎ ಮೈತ್ರಿ ಕೂಟದ ವಿವಿಧ ಪಕ್ಷಗಳ ಜೊತೆ ಸಭೆ ನಡೆಸಲಾಗುವುದು ಎಂದು ರಾಜನಾಥ್‌ ಸಿಂಗ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT