ADVERTISEMENT

ಮೋದಿಯನ್ನು ಸೋಲಿಸುವೆ : ಕೇಜ್ರಿವಾಲ್

ಬಿಜೆಪಿ ಸೇರ್ಪಡೆ ತಳ್ಳಿಹಾಕದ ಅರವಿಂದ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2014, 10:32 IST
Last Updated 2 ಏಪ್ರಿಲ್ 2014, 10:32 IST

ನವದೆಹಲಿ (ಐಎಎನ್ಎಸ್) : ‘ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಸೋಲಿಸಲೆಂದೇ ವಾರಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ’ ಎಂದು ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್ ಬುಧವಾರ ಸ್ಪಷ್ಟಪಡಿಸಿದರು. ಇದೇ ವೇಳೆ ಬಿಜೆಪಿ ಸೇರುವ ವದಂತಿಯನ್ನು ಅವರು ತಳ್ಳಿಹಾಕಿದರು.

ಪೂರ್ವ ದೆಹಲಿಯಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ಪ್ರಚಾರಕ್ಕೆ ಅಡ್ಡಿ ಪಡಿಸುತ್ತಲೇ ಇವೆ. ಆದರೆ ಕೊನೆಯ ಉಸಿರಿರುವವರೆಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

ಭ್ರಷ್ಟಾಚಾರದಲ್ಲಿ ಮುಳುಗಿರುವ ಪಕ್ಷಗಳ ಮೋದಿ ಮತ್ತು ರಾಹುಲ್ ಅವರನ್ನು ಸೋಲಿಸುವ ಅಗತ್ಯವಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು.

ಇನ್ನು ಕೇಜ್ರಿವಾಲ್ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಯನ್ನು ತಳ್ಳಿಹಾಕಿದ ಅವರು ‘ಒಂದೊಮ್ಮೆ ಸಂಸತ್ ಪ್ರವೇಶಿಸಲೇ ಬೇಕು ಎಂದಾಗಿದ್ದರೆ ಅಷ್ಟಾಗಿ ಪೈಪೋಟಿ ಇರದ ಯಾವುದಾದರೂ ಸುರಕ್ಷಿತ ಜಾಗದಿಂದ ಸ್ಪರ್ಧಿಸುತ್ತಿದ್ದೆ. ಆದರೆ ಮೋದಿ ಸೋಲಿಸುವುದೇ ನನ್ನ ಮುಖ್ಯ ಗುರಿ. ಈ ಕಾರಣಕ್ಕಾಗಿಯೇ ನಾನು ವಾರಣಸಿಯಲ್ಲಿ ಸ್ಪರ್ಧೆಗಿಳಿದಿದ್ದೇನೆ’ ಎಂದರು.

ADVERTISEMENT

ಇನ್ನೊಂದೆಡೆ ಅಮೇಥಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಲಿಸಲು ಕುಮಾರ್ ವಿಶ್ವಾಸ್ ಕಣದಲ್ಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.