ADVERTISEMENT

ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ

ಪಿಟಿಐ
Published 19 ಸೆಪ್ಟೆಂಬರ್ 2016, 8:34 IST
Last Updated 19 ಸೆಪ್ಟೆಂಬರ್ 2016, 8:34 IST
ಉರಿ ದಾಳಿ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು
ಉರಿ ದಾಳಿ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು   

ನವದೆಹಲಿ: ಉರಿಯಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಉನ್ನತಮಟ್ಟದ ಸಭೆ ನಡೆಸಿದರು.

ಗೃಹ ಸಚಿವ ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌, ಹಣಕಾಸು ಸಚಿವ ಅರುಣ್‌ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೊಬಾಲ್‌, ಭೂಸೇನಾ ಮುಖ್ಯಸ್ಥ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌ ಹಾಗೂ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕಣಿವೆ ರಾಜ್ಯದ ಸದ್ಯದ ಪರಿಸ್ಥಿತಿಯ ಬಗ್ಗೆ ಮೋದಿ ಅಧಿಕಾರಿಗಳಿಂದ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.