ADVERTISEMENT

ಮೋದಿ ಭಾರತ ವಿರೋಧಿ ಹೇಳಿಕೆ: ಕ್ಷಮೆಗೆ ಕಾಂಗ್ರೆಸ್‌ ಪಟ್ಟು

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2015, 11:13 IST
Last Updated 28 ಏಪ್ರಿಲ್ 2015, 11:13 IST

ನವದೆಹಲಿ(ಐಎಎನ್‌ಎಸ್‌):  ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಆರಂಭದಲ್ಲಿ ಜರ್ಮನಿ ಹಾಗೂ ಕೆನಡಾ ದೇಶಗಳಿಗೆ ಪ್ರವಾಸ ಕೈಗೊಂಡಾಗ  ‘ಕೊಳಕು ಭಾರತವನ್ನು ಸ್ವಚ್ಛ ಭಾರತವನ್ನಾಗಿ ಮತ್ತು ಹಗರಣಯುಕ್ತ’ ಭಾರತವನ್ನು ‘ಕೌಶಲ’ ಭಾರತವನ್ನಾಗಿ ಪರಿವರ್ತಿಸುವುದಾಗಿ ಹೇಳಿಕೆ ನೀಡಿದ್ದರು.

ಅವರ ಈ ಹೇಳಿಕೆಗೆ ಕಾಂಗ್ರೆಸ್‌ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿದೇಶಿ ನೆಲದಲ್ಲಿ ಮೋದಿ ದೇಶಕ್ಕೆ ಅವಮಾನ ಆಗುವಂತೆ ಮಾತನಾಡಿದ್ದಾರೆ. ಇದು ಭಾರತ ವಿರೋಧಿ ಹೇಳಿಕೆ.  ಕೂಡಲೇ ಇದಕ್ಕೆ ಕ್ಷಮೆ ಯಾಚಿಸಬೇಕು ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಆನಂದ್‌ ಶರ್ಮಾ ಆಗ್ರಹಿಸಿದರು.  ಮಂಗಳವಾರ ರಾಜ್ಯಸಭೆಯಲ್ಲೂ  ಅವರು ಈ ವಿಷಯ ಪ್ರಸ್ತಾಪಿಸಿದರು.

ಮೋದಿ ಬಿಜೆಪಿ ಮುಖಂಡರಾಗಿ ಅಥವಾ ವೈಯಕ್ತಿಕ ಉದ್ದೇಶಕ್ಕೆ ವಿದೇಶ ಪ್ರವಾಸ ಕೈಗೊಂಡಿಲ್ಲ. ಅವರು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದ ಅವರು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT